ಡಾಕ್ಟರ ಹೆಂಡತಿ ಹುಳಿಸಿಕೊಂಡು ಸಾಯುತ್ತಾಳೆ.
'ಹುಳಿಸಿಕೊಂಡು' ಎಂದರೆ 'ಹುಳುವಾಗಿಸಿಕೊಂಡು' ಅಂದರೆ... 'ಹುಳುವನ್ನು ದೇಹದಲ್ಲಿ ಹೊಂದಿರು' ಎಂದರ್ಥ. ದನ-ಕರುಗಳಿಗೆ ಗಾಯಗಳಾಗಿ ಕೆಲವೊಮ್ಮೆ ಅದರಲ್ಲಿ ಹುಳುಗಳಾಗುತ್ತವೆ. ಆಗ ಹೇಳುವುದುಂಟು- "ದನ ಹುಳಿಸಿಕೊಂಡಿದೆ" ಎಂದು.
ಡಾಕ್ಟರಿಗೆ ಬೇರೆ ರೋಗಿಗಳನ್ನು ನೋಡಿ ಮುಗಿಸುವಷ್ಟರಲ್ಲೇ ಸಾಕು
ಸಾಕಾಗಿರುತ್ತದೆ. ಮನೆಯಲ್ಲಿ ಯಾರಿಗಾದರೂ ಹುಷಾರಿಲ್ಲದಿದ್ದರೂ ನೋಡಲು ಪುರಸೊತ್ತಿಲ್ಲ. ಹೆಂಡತಿಗೆ
ಚಿಕ್ಕ ಗಾಯವಾದರೆ, "ಚಿಕ್ಕ ಗಾಯ ಬಿಡು, ಹೋಗುತ್ತದೆ" ಎಂದು ಉಪೇಕ್ಷಿಸುತ್ತಾನೆ. ಅದೇ ಗಾಯ ದೊಡ್ಡದಾಗುತ್ತದೆ, ಅದರಲ್ಲಿ ಹುಳುಗಳಾಗುತ್ತವೆ, ಆದರೂ ನೋಡಲು ಡಾಕ್ಟರಿಗೆ ಬಿಡುವಿಲ್ಲ. ಹುಳುಗಳನ್ನು ಹೊಂದಿದ ಗಾಯ ಹೆಂಡತಿಯ ಸಾವಿಗೂ ಕಾರಣವಾಗಬಹುದು.
ಊರಿಗೆಲ್ಲ ಮದ್ದು ನೀಡುವ ಡಾಕ್ಟರು ಮನೆಯ ಜನರ ಆರೋಗ್ಯವನ್ನು ಉಪೇಕ್ಷಿಸಿದಾಗ ಬೇಸರದಿಂದ ಹೇಳುವ
ಮಾತು ಇದು. ಇಂಥದೇ ಒಂದು ಗಾದೆಯನ್ನು ಈ ಹಿಂದೆ ಹಾಕಿದ್ದೇನೆ ನೋಡಿ- http://seemahegde78.blogspot.in/2008/10/199.html
ಕುಂಬಾರನ ಮನೆಯ ಮಡಿಕೆ ತೂತು ಮತ್ತು ನೇಕಾರನ ಹೆಂಡತಿಗೆ ಹರುಕಲು ಸೀರೆ ಎನ್ನುವ ಗಾದೆಗಳಂತೆಯೇ ಡಾಕ್ಟರ ಹೆಂಡತಿಯ ಗಾದೆಯೂ ಕೂಡ.