ನೊಣ ತಿಂದು ಜಾತಿ ಕೆಟ್ಟಂತೆ.
ಯಾವುದೇ ಮಾಂಸವನ್ನು ತಿಂದರೂ ಜಾತಿ ಕೆಡುತ್ತದೆ. ನೊಣದಂಥ ಕೀಟವನ್ನು ತಿಂದರೂ ಅದು ಮಾಂಸವೇ ಆಗಿರುವುದರಿಂದ
ಜಾತಿ ಕೆಟ್ಟೇ ಕೆಡುತ್ತದೆ. ಎಷ್ಟೋ ವರ್ಷಗಳ ಕಾಲ ಜಾತಿಗೆ ಬದ್ಧನಾಗಿ ನಡೆದುಕೊಂಡು ಒಮ್ಮೆ ಅರಿವಿಲ್ಲದೆಯೇ
ನೊಣವನ್ನು ತಿಂದು ಜಾತಿ ಕೆಟ್ಟುಹೋಗುತ್ತದೆ. ಅಂದರೆ, ಎಷ್ಟೋ ವರ್ಷ ಸರಿಯಾಗಿ ನಡೆದುಕೊಂಡು ಎಂದಾದರೊಮ್ಮೆ ಅತಿ ಚಿಕ್ಕ ತಪ್ಪಿನಿಂದಾಗಿ
reputation ಕೆಡುವಂತಾದರೆ ಈ ಗಾದೆಯನ್ನು ಬಳಸುತ್ತಾರೆ-
"ಅಯ್ಯೋ, ನೊಣತಿಂದು ಜಾತಿ ಕೆಟ್ಟಂತಾಯಿತು" ಎಂದು.
ಇನ್ನೂ ಕೆಲವೊಮ್ಮೆ, “ಸಣ್ಣ-ಪುಟ್ಟ ತಪ್ಪುಗಳಾಗುವ ಬಗ್ಗೆ
ಹುಷಾರಾಗಿರೋಣ; ನೊಣ ತಿಂದು ಜಾತಿ ಕೆಡುವುದು ಬೇಡ"
ಎಂದೂ ಕೂಡ ಹೇಳುತ್ತಾರೆ.
ಇದೇ ರೀತಿಯಲ್ಲಿ ಬಳಸುವ ಇನ್ನೊಂದು ಗಾದೆ- ಮಾಳಶೆಟ್ಟಿ ಸಾಯುವ ಕಾಲಕ್ಕೆ ಮೀನು ತಿಂದಿದ್ದ.
ಶೆಟ್ಟಿಯಾದರೂ ಅವನು ಎಂದೂ ಮೀನು ತಿಂದಿರಲಿಲ್ಲ, ಆದರೆ ಅದೇನಾಯಿತೋ ಗೊತ್ತಿಲ್ಲ- ಸಾಯುವ ಕಡೇ ಕಾಲದಲ್ಲಿ ಮೀನು ತಿಂದುಬಿಟ್ಟಿದ್ದ!
6 comments:
ನಿಜ, ಅರಿವಿದ್ದೂ ಮಾಡುವ ಅಪರಾಧಗಳು ಕ್ಷಮಾರ್ಹ ಅಲ್ಲವೇ ಅಲ್ಲ.
@ Badarinath, 100% nija.
chanda ide
@Chukki,
Thanks a lot :-)
ಇನ್ನೊಂದು .. ಸರ್ವ ಬಣ್ಣವನ್ನೂ ಮಸಿ ನುಂಗಿತ್ತು
@Harisha,
Houdu, adna swalpa bere context nalli balasta.
Post a Comment